ಪುತ್ತೂರು: ರಾಜ್ಯ ಡಾಡ್ಜ್ ಬಾಲ್ ಕ್ರೀಡಾಕೂಟದಲ್ಲಿ ವಿಜೇತರಾದ ಅಕ್ಷಯ ಕಾಲೇಜಿನ ತಂಡಕ್ಕೆ ಅಭಿನಂದನಾ ಕಾರ್ಯಕ್ರಮ “ಅಕ್ಷಯಾಭಿನಂದನಾ” ಜು.12 ರಂದು ಮಧ್ಯಾಹ್ನ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸುದಾನ ವಸತಿ ಶಾಲೆಯ ಸಂಚಾಲಕರಾದ ವಿಜಯ್ ಹಾರ್ವಿನ್ ರವರು ನೆರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ರವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎನ್.ಕೆ., ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಆಶಾ ಬೆಳ್ಳಾರೆ ರವರು ಆಗಮಿಸಲಿದ್ದಾರೆ.



























