ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಜಾರಿಗೆ ಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ, ಪೌಜಿಯಾ, ಸೌದ ಮತ್ತು ಮಗು ಆರು ತಿಂಗಳ ಮಗು ಪವಾಡಸದೃಶವಾಗಿ
ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಬಂಟ್ವಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಕಮರಿಗೆ ಉರುಳಿ ತಲೆಕೆಳಗಾಗಿ ಕಾರು ಬಿದ್ದಿದೆ.



























