ಪುತ್ತೂರು: ಆಟೋ ಚಾಲಕ ದಲಿತ ಯುವಕ ನಾಗೇಶ್ ಎಂಬವರಿಗೆ ಜಾತಿನಿಂದನೆ ಮಾಡಿ ಹಲ್ಲೆ ನಡೆಸಿರುವ ನೆಹರುನಗರದ ಪ್ರಸಾದ್ ( ಚಿನ್ನು) ಎಂಬವರ ವಿರುದ್ಧ ಪ್ರಕರಣ ದಾಖಲಿಸಿ ದಿನಗಳು ಕಳೆದರೂ ಬಂಧನ ಮಾಡಲಾಗಿಲ್ಲ, ಕೂಡಲೇ ಜಾತಿ ನಿಂದನೆ ಹಾಗೂ ಹಲ್ಲೆ ನಡೆಸಿರುವ ವ್ಯಕ್ತಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್ ಸಿ ಘಟಕದ ವತಿಯಿಂದ ಪುತ್ತೂರು ಡಿವೈಎಸ್ಪಿ ಯವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷರಾದ ಕೇಶವ ಪಡೀಲ್,ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಉಪಾಧ್ಯಕ್ಷರಾದ ಪ್ರಹ್ಲಾದ್ ಬೆಳ್ಳಿಪಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಉಪಾಧ್ಯಕ್ಷರಾದ ಅಚ್ಚುತ್ತ ಬೆಟ್ಟಂಪಾಡಿ, ಎಸ್ಸಿ ಘಟಕದ ಸದಸ್ಯರಾದ ಜಯಂತ್ ನೆಹರುನಗರ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

























