ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಪಾರ ಪೊಯ್ಯೆ ನಿವಾಸಿ ದಿ. ಬಾಲಕೃಷ್ಣ ಗೌಡ ರವರ ಪುತ್ರ ಭರತ್(30) ಅನಾರೋಗ್ಯದಿಂದಾಗಿ ಜು.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಭರತ್ ರವರು ಕೆಲ ಸಮಯಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಕೊನೆಯುಸಿರೆಳೆದಿದ್ದಾರೆ.
ಆರ್ಥಿಕವಾಗಿ ಹಿಂದುಳಿದಿರುವ ಇವರ ಆಸ್ಪತ್ರೆ ಖರ್ಚಿಗಾಗಿ ಕಳೆದ ಎರಡು ದಿನಗಳಿಂದ ದಾನಿಗಳು ನೆರವಿನ ಹಸ್ತ ಚಾಚಿದ್ದರು. ಆದರೂ ಭರತ್ ರವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.



























