ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದಲ್ಲಿ ಸೆ.10 ರಂದು ಶ್ರೀರಾಮ ಗೆಳೆಯರ ಬಳಗದ ವತಿಯಿಂದ ಅರ್ಧ ಏಕಾಹ ಭಜನೆ ಮತ್ತು ಸಾರ್ವಜನಿಕ ಶನಿ ಪೂಜೆ ಮತ್ತು ಸುಧರ್ಮ ಸಭೆ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ನಡೆಯಲಿದ್ದು, ಈ ಹಿನ್ನಲೆಯಲ್ಲಿ ದೇವಸ್ಥಾನ ಸುತ್ತು ಪೌಳಿಯಲ್ಲಿ ಇದ್ದ ಹುಲ್ಲು ಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು.

ಶನಿಪೂಜಾ ಸಮಿತಿ ಅಧ್ಯಕ್ಷ ಅನಿಲ್ ಕಣ್ಣರ್ನೂಜಿ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮತ್ತು ಶನಿಪೂಜಾ ಸಮಿತಿ ಪ್ರದಾನ ಕಾರ್ಯದರ್ಶಿ ಬಾಲಚಂದ್ರ ಗೌಡ ಕಡ್ಯ ಮತ್ತು ಸಂಚಾಲಕ ಧನಂಜಯ ರವರ ನೇತೃತ್ವದಲ್ಲಿ ಶ್ರಮದಾನ ನಡೆಯಿತು.

ಕಾರ್ಯಕ್ರಮದಲ್ಲಿ ಸಮಿತಿ ಸದಸ್ಯರು ಮತ್ತು ಶ್ರೀರಾಮ ಗೆಳೆಯರ ಬಳಗದ ಸದಸ್ಯರು ಭಾಗವಹಿಸಿದ್ದರು.



























