ಪುತ್ತೂರು: ಯುವಕನೋರ್ವನ ಮೇಲೆ ತಂಡವೊಂದು ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಎಂಟು ಮಂದಿಯ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐದು ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ರವರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುನೀಲ್, ಸುಧೀರ್, ಶಿವ, ಸದಾಶಿವ, ರಂಜಿತ್ ನನ್ನು ಬಂಧಿಸಲಾಗಿದೆ.
ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ವಾಸಿ ಮಸೂದ್ ಎಂಬಾತನು ಸುಮಾರು 1 ತಿಂಗಳ ಹಿಂದೆ ಸುಳ್ಯ ತಾಲೂಕು ಕಳಂಜ ಗ್ರಾಮದ ಕಳಂಜದಲ್ಲಿರುವ ಅಜ್ಞ ಅಬ್ಬು ಮುಕ್ತಿ ಎಂಬವರ ಮನೆಗೆ ಬಂದವನು ಸ್ಥಳೀಯವಾಗಿ ಕೂಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.
ಜು.19 ರಂದು ಸಂಜೆ ಅಂಗಡಿ ಬಳಿ ಮಸೂದನು ಸುಧೀರ್ ಗೆ ತಾಗಿ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದು, ಈ ವಿಷಯವನ್ನು ಮಾತನಾಡಿ ಸರಿ ಮಾಡುವ ಎಂದು ಕರೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಇಬ್ರಾಹಿಂ ಶಾನೀಫ್ ಕಳಂಜದಲ್ಲಿರುವ ಸಮಯ ನಗರ ಬಸ್ಸು ನಿಲ್ದಾಣದ ಬಳಿ ಜನ ಗುಂಪು ಸೇರಿರುವುದನ್ನು ಕಂಡು ರಸ್ತೆಗೆ ಬಂದಾಗ ಅಲ್ಲಿ ಪರಿಚಯದ ಅಭಿಲಾಶ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್ ಮತ್ತು ಭಾಸ್ಕರ ರವರು ಇದ್ದು, ಈ ವೇಳೆ ಇಬ್ರಾಹಿಂ ಶಾನೀಫ್ ಕರೆದು ಸಂಜೆಯ ವೇಳೆ ಸುಧೀರನಿಗೆ ಮಸೂದನು ಅಂಗಡಿಯ ಬಳಿ ತಾಗಿದ ವಿಚಾರದಲ್ಲಿ ಪರಸ್ಪರ ಹೊಡೆದಾಡಿಕೊಂಡು ಬಳಿಕ ಮಸೂದನು ಸುಧೀರನಿಗೆ ಬಾಟಲ್ ತೋರಿಸಿ ಬೆದರಿಕೆ ಹಾಕಿರುವುದಾಗಿ ಹೇಳಿ ನೀನು ಮಸೂದನನ್ನು ಕರೆದುಕೊಂಡು ಬಾ. ನಾವು ಮಾತನಾಡಿ ಮುಗಿಸುವ ಎಂದು ಹೇಳಿದ್ದರು.
ಅದರಂತೆ ಇಬ್ರಾಹಿಂ ಮಸೂದ್ ನ ಅಜ್ಜಿ ಮನೆಗೆ ಹೋಗಿ ಆತನನ್ನು ಕರೆದುಕೊಂಡು ಬಂದಿದ್ದು, ಈ ವೇಳೆ ಆರೋಪಿತರು ಮಸೂದ್ ನ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಇಬ್ರಾಹಿಂ ಹೊಡೆಯಬೇಡಿ ಅಂತ ಕೇಳಿಕೊಂಡರು, ಅವರು ಕೇಳದೆ ಮಸೂದ್ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಠಾಣೆಯಲ್ಲಿ ಇಬ್ರಾಹಿಂ ಶಾನೀಫ್ ನೀಡಿದ ದೂರಿನಂತೆ 60/2022 ಕಲಂ :143, 147, 323, 324, 307 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಉಳಿದವರ ಪತ್ತೆಗಾಗಿ ಬಲೆ ಬೀಸಿದ್ದಾರೆ..

























