ಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಅನ್ಯಕೋಮಿನ ಯುವಕನನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಜು.21 ರಂದು ಮಂಜಲಡ್ಪು ಸಮೀಪ ನಡೆದಿದೆ.
ಸವಣೂರು ಮೂಲದ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಮಂಜಲಡ್ಪು ಬಳಿ ಕರೆಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ವಿಷಯ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..


























