ಮಂಗಳೂರು: ನಗರದ ಬಾವುಟಗುಡ್ಡೆ ಸಮೀಪದ ಅಪಾರ್ಟ್ ಮೆಂಟ್ (ಪಿಜಿ) ನಲ್ಲಿ ನಡೆದ ವಿದ್ಯಾರ್ಥಿಗಳ ಚುಂಬನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಒಟ್ಟು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಬಂಧಿತರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದು, ಅವರನ್ನು ಬಾಲ ನ್ಯಾಯಮಂಡಳಿ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಅವರನ್ನು ಹೆತ್ತವರಿಗೆ ಒಪ್ಪಿಸಿದೆ. ಅಗತ್ಯ ಬಿದ್ದಾಗ ತನಿಖಾಧಿಕಾರಿಯವರ ಮುಂದೆ ಹಾಜರಾಗುವಂತೆ ಆದೇಶ ನೀಡಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಬಂಧಿತರಲ್ಲಿ ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದವನು ಕೂಡ ಸೇರಿದ್ದಾರೆ. ಒಟ್ಟು ಸುಮಾರು 8 ಮಂದಿ ವಿದ್ಯಾರ್ಥಿಗಳು ಈ ಕೃತ್ಯದಲ್ಲಿ ಭಾಗವಹಿಸಿದ್ದು, ಈ ಪೈಕಿ ಓರ್ವ ಈಗಾಗಲೇ ವಿದೇಶಕ್ಕೆ ತೆರಳಿದ್ದಾನೆ. ಮೂವರು ವಿದ್ಯಾರ್ಥಿನಿಯರು ದೌರ್ಜನ್ಯಕ್ಕೊಳಗಾಗಿದ್ದು, ಅವರು ಕೂಡ ಅಪ್ರಾಪ್ತ ವಯಸ್ಕರು ಎಂದು ತಿಳಿದು ಬಂದಿದೆ.



























