ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಮತ್ತು ಹೊರಜಿಲ್ಲೆಗಳ ಆಹಾರ ಪದ್ಧತಿಯಲ್ಲಿ ಬಹಳಷ್ಟು ವ್ಯತ್ಯಾಸಗಳಿದ್ದು, ಹಳ್ಳಿ ಪ್ರದೇಶದ ಆಹಾರಗಳಲ್ಲಿ ಔಷಧೀಯ ಗುಣಗಳಿವೆ. ಆಟಿ ತಿಂಗಳಿನಲ್ಲಿ ಉಪಯೋಗಿಸುವ ವಿಶೇಷ ಖಾದ್ಯಗಳು ಶರೀರದ ಆರೋಗ್ಯದ ಸಮತೋಲನವನ್ನು ಕಾಯ್ದುಕೊಂಡು ಬರುತ್ತವೆ. ಮಕ್ಕಳಲ್ಲಿ ಈ ಬಗ್ಗೆ ತಿಳುವಳಿಕೆಯನ್ನು ಮೂಡಿಸುವ ಅಗತ್ಯ ಇದೆ ಎಂದು ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಹೇಳಿದರು.
ಮಾಣಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಜರಗಿದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಜಾತಿ ಸಂಘಟನೆಗಳು ಸಮಾಜದ ಎಲ್ಲಾ ವರ್ಗದ ಜನರ ಅಗತ್ಯಗಳನ್ನು ಅರಿತು ಕಾರ್ಯಕ್ರಮಗಳನ್ನು ಸಂಘಟಿಸಬೇಕು. ಆರ್ಥಿಕವಾಗಿ ಅಶಕ್ತರಾಗಿರುವವರ ಬಗ್ಗೆ ಕಾಳಜಿಯನ್ನು ಇಟ್ಟುಕೊಳ್ಳಬೇಕು. ಈ ನಿಟ್ಟಿನಲ್ಲಿ ಮಾಣಿ ವಲಯ ಬಂಟರ ಸಂಘದ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಮಾಣಿ ವಲಯ ಬಂಟರ ಸಂಘದ ಅಧ್ಯಕ್ಷ ಬಿ.ಎಂ.ಗಂಗಾಧರ ರೈ ಅಧ್ಯಕ್ಷತೆ ವಹಿಸಿದ್ದರು. ವಲಯ ಸಂಘದ ಸ್ಥಾಪಕಾಧ್ಯಕ್ಷ ರಘುರಾಮ ಶೆಟ್ಟಿ ಪಂಚವಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಲಯದ ಸಂಘದ ಗೌರವಾಧ್ಯಕ್ಷೆ ಪ್ರಫುಲ್ಲಾ.ಆರ್.ರೈ, ತಾಲೂಕು ಬಂಟರ ಸಂಘದ ಸ್ಥಾಪಕಾಧ್ಯಕ್ಷ ಕಿರಣ್ ಹೆಗ್ಡೆ ಅನಂತಾಡಿ, ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಪ್ರಹ್ಲಾದ ಶೆಟ್ಟಿ ಜಡ್ತಿಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಮಾಣಿಗುತ್ತು ಸಚಿನ್ ರೈ, ಸಂಘದ ಮಾಜಿ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಬಾಲಕೃಷ್ಣ ಆಳ್ವ ಕೊಡಾಜೆ, ಪ್ರವೀಣ್ ರೈ ಕಲ್ಲಾಜೆ ಭಾಗವಹಿಸಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗೋಪಾಲಕೃಷ್ಣ ರೈ ಬರಿಮಾರು, ಯಶೋದಾ ಶೆಟ್ಟಿ ತೋಟ, ರಾಜೀವ ಶೆಟ್ಟಿ ಇರುಬೈಲು, ವಿಂದ್ಯಾ.ಎಸ್.ರೈ ಕುರುಂಬ್ಲಾಜೆ ಇವರನ್ನು ಸನ್ಮಾನಿಸಲಾಯಿತು. ಹತ್ತನೇ ತರಗತಿ ಮತ್ತು ದ್ವಿತೀಯ ಪಿ.ಯು.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಆಟಿ ತಿಂಗಳ ವಿಶೇಷ ಖಾದ್ಯಗಳನ್ನು ತಯಾರಿಸಿದ ಮಹಿಳೆಯರನ್ನು ಗುರುತಿಸಲಾಯಿತು.
ಸಂಘದ ಪದಾಧಿಕಾರಿಗಳಾದ ಪುಷ್ಪರಾಜ್ ಹೆಗ್ಡೆ ಸತ್ತಿಕಲ್ಲು, ರತ್ನಾಕರ ರೈ ಶಬರಿ, ನಿರಂಜನ್ ರೈ ಕುರ್ಲೆತ್ತಿಮಾರು, ವಿಜೇತ್ ರೈ ಬಿಳಿಯೂರು, ಮೋಹಿನಿ ರೈ, ಜ್ಯೋತಿ.ಎನ್.ಹೆಗ್ಡೆ, ಸಜಿತ್ ಶೆಟ್ಟಿ, ಜ್ಯೋತಿ.ಪಿ.ಶೆಟ್ಟಿ, ರಂಜಿತ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಗಂಗಾಧರ ರೈ ತುಂಗೆರೆಕೋಡಿ ಸ್ವಾಗತಿಸಿದರು. ಕೋಶಾಧಿಕಾರಿ ಸಜಿತ್ ಶೆಟ್ಟಿ ಜಡ್ತಿಲ ವಂದಿಸಿದರು. ವಿಜಯಲಕ್ಷ್ಮಿ.ವಿ.ಶೆಟ್ಟಿ, ಮಲ್ಲಿಕಾ.ಎ.ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಜಿಲ್ಲೆಯ ಪ್ರಸಿದ್ಧ ಬಂಟ ಕಲಾವಿದರಿಂದ ಶ್ರೀ ಕೃಷ್ಣ ಸಂಧಾನ ತಾಳಮದ್ದಲೆ ಮತ್ತು ಬಂಟ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.