ವಿಟ್ಲ: ಎರಡು ವರ್ಷದ ಹಿಂದೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ, ಪೆರುವಾಯಿಯಲ್ಲಿ ತಂದೆಯೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ(ಶಿಘ್ರ ಪಥ-2) ಮಂಗಳೂರು ನ್ಯಾಯಾಲಯದಲ್ಲಿ ವಿಚಾರಣೆಯಾಗಿ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಮಂಗಳೂರು ಹೆಚ್ಚುವರಿ ಮತ್ತು ಸೆಷನ್ಸ್ (ಶಿಘ್ರ ಪಥ-2) ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಎಂ. ರಾಧಾಕೃಷ್ಣ ರವರು ಆರೋಪಿಗೆ ತೀರ್ಪು ವಿಧಿಸಿದ್ದಾರೆ.
ಪ್ರಕರಣದಲ್ಲಿ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ರವರು ಪೂರ್ಣ ಪ್ರಮಾಣದ ತನಿಖೆ ನಡೆಸಿ, ಆರೋಪಿಯ ವಿರುದ್ದ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸರ್ಕಾರಿ ಅಭಿಯೋಜಕರಾದ ವೆಂಕಟರಮಣ ಸ್ವಾಮಿ ರವರು ಸರ್ಕಾರದ ಪರವಾಗಿ ನ್ಯಾಯಾಲಯಲ್ಲಿ ವಾದಿಸಿದರು.
ವಿಟ್ಲ ಠಾಣಾ ಕೋರ್ಟ್ ಮಾನಿಟರಿಂಗ್ ಸೆಲ್ ನ ಅಧಿಕಾರಿ ಸಿಬ್ಬಂದಿಗಳು ಪ್ರಕರಣದ ವಿಚಾರಣಾ ಹಂತಗಳನ್ನು ನಿರ್ವಹಿಸಿದ್ದಾರೆ.



























