ಪುತ್ತೂರು: ಬಿಜೆಪಿ ಪುತ್ತೂರು ನಗರ ಮಂಡಲದ ಜುಲೈ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆ ಜು.26 ರಂದು ವಿಜಯ ಸುಪಾರಿ ಸಭಾಂಗಣದಲ್ಲಿ ನಡೆಯಿತು.

ನಗರಸಭಾಧ್ಯಕ್ಷ ಜೀವಂಧರ್ ಜೈನ್ ರವರು ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನಪರ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸುವಂತೆ ಸೂಚಿಸಿದರಲ್ಲದೆ, ನಗರಸಭೆಯ ಆಡಳಿತವು ಈ ಹಿಂದೆ ಚುನಾವಣೆಯಲ್ಲಿ ನೀಡಿದಂತಹ ಪ್ರಣಾಳಿಕೆಯನ್ನು ಚಾಚೂ ತಪ್ಪದೆ ನೆರವೇರಿಸುತ್ತಿದ್ದು, ಮುಂದಕ್ಕೆ ಪುತ್ತೂರು ನಗರಸಭೆ ರಾಜ್ಯದಲ್ಲೇ ಪ್ರಥಮ ಸ್ಥಾನ ಹೊಂದಲು ಎಲ್ಲರ ಸಹಕಾರ ಬೇಕಿದೆ ಎಂದು ಕೋರಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ರವರು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ರವರು ಪಕ್ಷದ ಮುಂದಿನ ಕಾರ್ಯಯೋಜನೆ ಬಗ್ಗೆ ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ವೆಂಕಟ್ ವಳಲಂಬೆ ಉಪಸ್ಥಿತರಿದ್ದರು. ಸಭೆಯಲ್ಲಿ ನಗರ ಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ನಗರ ಸಭಾ ಸದಸ್ಯರುಗಳು, ಪಕ್ಷದ ಜವಾಬ್ದಾರಿಗಳನ್ನು ಹೊಂದಿದ ಕಾರ್ಯಕರ್ತರು ಉಪಸ್ಥಿತರಿದ್ದರು. ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ ಸ್ವಾಗತಿಸಿ, ಜಯಶ್ರೀ ಎಸ್ ಶೆಟ್ಟಿ ವಂದಿಸಿದರು. ಮಂಡಲ ಉಪಾಧ್ಯಕ್ಷ ಇಂದು ಶೇಖರ್ ಕಾರ್ಯಕ್ರಮ ನಿರ್ವಹಿಸಿದರು.





























