ಪುತ್ತೂರು: ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲದ ವತಿಯಿಂದ ಈಶ್ವರಮಂಗಲ ಮೇಜರ್ ಸಂದೀಪ್ ಉನ್ನಿಕೃಷ್ಣನ್ ವೃತ್ತದ ಬಳಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ‘ಕಾರ್ಗಿಲ್ ವಿಜಯೋತ್ಸವ’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಿಗೆ ಮತ್ತು ಪೋಲಿಸ್ ಇಲಾಖೆ ಅಧಿಕಾರಿಗಳಿಗೆ ಹೂ ಗುಚ್ಛ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪೂರ್ಣತ್ಮಾ ರಾಮ್, ಶ್ರೀಕೃಷ್ಣ ಭಟ್ ಮುಂಡ್ಯ, ಶಿವರಾಮ ಪಿ, ಆನಂದ ರೈ ಸಾಂತ್ಯ ಕಾರ್ಗಿಲ್ ವಿಜಯೋತ್ಸವದ ಬಗ್ಗೆ ಮಾತನಾಡಿದರು.

ಈ ವೇಳೆ ಪರಿವಾರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು. ಅಕ್ಷಣ ಮತ್ತು ಅರ್ಪಣ ರವರ ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮವನ್ನು ಪೂರ್ಣ ಗೊಳಿಸಲಾಯಿತು.





























