ಬೆಳ್ಳಾರೆ: ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಜು.26 ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದಿದೆ.
ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೃತ ಯುವಕ.

ಪ್ರವೀಣ್ ರವರು ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು.
ಪ್ರವೀಣ್ ರವರು ಅವರ ಸ್ವಂತ ಅಂಗಡಿ ಮುಂಭಾಗ ನಿಂತಿದ್ದ ವೇಳೆ ಬೈಕ್ ನಲ್ಲಿ ಮುಸುಕು ಧರಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದು, ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ..
ಗಂಭೀರ ಗಾಯಗೊಂಡ ಪ್ರವೀಣ್ ರವರನ್ನು ಪುತ್ತೂರು ಪ್ರಗತಿ ಆಸ್ಪತ್ರೆಗೆ ಕರೆ ತರಲಾಗಿದ್ದು, ಆಸ್ಪತ್ರೆಗೆ ತಲುಪುವ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಆಸ್ಪತ್ರೆಯ ಮೂಲಗಳಿಂದ ಮಾಹಿತಿ ಲಭಿಸಿದೆ.
ಪ್ರವೀಣ್ ರವರು ಸಾವನ್ನಪ್ಪಿದ ಹಿನ್ನೆಲೆ ಆಸ್ಪತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾವಣೆಗೊಂಡಿದ್ದಾರೆ.



























