ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಏಳು ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಕ್ಷಯ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿರುವ ಮಧು ರಾಯನ್ ಅವರು ನೀಡಿದ ದೂರಿನಂತೆ ಕೃತ್ಯವೆಸಗಿದ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಲಾಗಿದೆ. ಮೂವರು ಕೇರಳ ಮೂಲದವರು ಎಂದು ಶಂಕಿಸಲಾಗಿದೆ.
ಮಂಗಳವಾರ ರಾತ್ರಿ ಪ್ರವೀಣ್ ಕೋಳಿ ಅಂಗಡಿ ಬಳಿ ಮೂವರು ಅಪರಿಚಿತರು ಬೈಕ್ ನಲ್ಲಿ ಬಂದು ಪ್ರವೀಣ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಗಂಭೀರ ಗಾಯೊಗೊಂಡಿದ್ದ ಪ್ರವೀಣ್ ಅವರನ್ನು ಆಸ್ಪತ್ರೆಗೆ ರವಾನಿಸದರೂ ಅದಾಗಲೇ ಅವರು ಮೃತಪಟ್ಟಿದ್ದರು.



























