ಪುತ್ತೂರು: ಪ್ರವೀಣ್ ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಸಂಭವಿಸಿದ ಲಾಠಿ ಚಾರ್ಜ್ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯೋರ್ವರು ಕಾರ್ಯಕರ್ತರ ಮೇಲೆ ಹೆಲ್ಮೆಟ್ ನಿಂದ ದಾಳಿ ನಡೆಸಿದ ಘಟನೆ ನಡೆದಿದೆ.

ಕಾರ್ಯಕರ್ತರೊಬ್ಬರ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ತಾನು ಧರಿಸಿದ್ದ ಹೆಲ್ಮೆಟ್ ನಿಂದಲೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಹಿಂದೂ ಮುಖಂಡರು ಆ ಪೊಲೀಸ್ ಅಧಿಕಾರಿಯನ್ನು ಶೀಘ್ರವೇ ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಡಿವೈಎಸ್ಪಿ ಅವರಲ್ಲಿ ಮನವಿ ಮಾಡಿಕೊಂಡರು.






























