ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಂಗಡಿಯನ್ನು ಆಕ್ರೋಶಿತರು ಹಾನಿಗೊಳಿಸಿದ ಹಾಗೂ ಟಯರ್ ಗೆ ಬೆಂಕಿ ಹಾಕಿದ ಘಟನೆ ನಡೆದಿದೆ.

ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಮೂಲದ ಶಫೀಕ್ ಬಂಧಿತನಾಗಿದ್ದಾನೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಕ್ರೋಶಿತರಾದ ಕೆಲವರು ಆತ ಕೆಲಸ ನಿರ್ವಹಿಸುತ್ತಿದ್ದ ಗುತ್ತಿಗಾರಿನ ಅಂಗಡಿಯ ಮೇಲೆ ದಾಳಿ ನಡೆಸಿ ಹಾನಿಗೊಳಿಸಿದ್ದಾರೆ.





























