ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ನೀಡಿದ್ದು, ಈ ಹಿನ್ನೆಲೆ ಸಂಜೆಯಾಗುತ್ತಲೇ ಪುತ್ತೂರು, ವಿಟ್ಲ ಪೇಟೆ ಇಡೀ ಬಂದ್ ಆಗಿದೆ.
ತುರ್ತುಸೇವೆಗಳು, ಮೆಡಿಕಲ್, ಆಸ್ಪತ್ರೆಗಳನ್ನು ಬಿಟ್ಟರೆ ಬಾಕಿ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ಜನರ ಓಡಾಟವೂ ಅತೀ ವಿರಳವಾಗಿದ್ದು, ಅಗತ್ಯವಿದ್ದವರು ಮಾತ್ರ ಪೇಟೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.



























