ಪುತ್ತೂರು: ತಾಲೂಕಿನಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮನವಿಯಂತೆ ಪುತ್ತೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ಕ್ಕೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ತಿಳಿಸಿದ್ದಾರೆ.
ಮಂಗಳೂರು, ಉಳ್ಳಾಲ, ಬಂಟ್ವಾಳ, ಮೂಲ್ಕಿ-ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು(ಜು.30) ರಜೆ ಸಾರಲಾಗಿದೆ.
ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಆದೇಶ ನೀಡಿದ್ದರು.
ಅದರಂತೆ ಪುತ್ತೂರು ತಾಲೂಕಿನ ಕ್ಷೇತ್ರಶಿಕ್ಷಣಾಧಿಕಾರಿಗಳ ಮನವಿಯಂತೆ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.


























