ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ.
ಮೃತರನ್ನು ವಿಟ್ಲ ಶಿವಾಜಿನಗರ ನೆಕ್ಕರೆ ಕಾಡು ನಿವಾಸಿ ಸುರೇಶ್(23) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಸುರೇಶ್ ರವರನ್ನು ಫ್ರೆಂಡ್ಸ್ ವಿಟ್ಲ ಆಂಬ್ಯುಲೆನ್ಸ್ ಮೂಲಕ ವಿಟ್ಲ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ವೈದ್ಯರು ಪರಿಶೀಲಿಸಿ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಸುರೇಶ್ ರವರು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ನೊಂದಿದ್ದು, ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ.
ಮೃತರು ತಾಯಿ, ಸಹೋದರ ಮತ್ತು ಬಂಧು-ಮಿತ್ರರನ್ನು ಅಗಲಿದ್ದಾರೆ.