ವಿಟ್ಲ: ಅನೇಕ ವರ್ಷಗಳಿಂದ ಅಡ್ಯನಡ್ಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ಹದಗೆಟ್ಟಿದ್ದು, ಸಾರ್ವಜನಿಕರು ಸಂಕಷ್ಟ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಅಡ್ಯನಡ್ಕ-ಮರಕ್ಕಿಣಿ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆಯು ಹಲವು ವರ್ಷಗಳಿಂದ ಡಾಮಾರೀಕರಣ ದುರಸ್ಥಿಯಾಗದೆ ಹದಗೆಟ್ಟಿದ್ದು, ಆಸ್ಪತ್ರೆಗೆ ತೆರಳುವವರು ಮತ್ತು ಈ ಮಾರ್ಗವಾಗಿ ಮಾಣಿಲ, ನೆಗಳಗುಳಿಗೆ ತೆರಳುವ ಸಾರ್ವಜನಿಕರು ಸಂಕಷ್ಟ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ಹಲವು ಸಮಯಗಳಿಂದ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿದ್ದು, ಆದರೇ ಈ ಬಗ್ಗೆ ಗಮನ ಹರಿಸದ ಅಧಿಕಾರಿಗಳು ಯಾವುದೇ ದುರಸ್ಥಿ ಕಾರ್ಯ ನಡೆಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇನ್ನಾದರೂ ಅಧಿಕಾರಿಗಳು ಶೀಘ್ರವಾಗಿ ರಸ್ತೆ ದುರಸ್ತಿಗೊಳಿಸಿ, ಸುಗಮವಾಗಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಾರ್ವಜನಿಕ ವಲಯದಲ್ಲಿ ಆಗ್ರಹ ವ್ಯಕ್ತವಾಗಿದೆ..
