ಕಾರ್ಕಳ: 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಪ್ರಥಮ ಸ್ಥಾನ ಗಳಿಸಿದ್ದಾರೆ.

ʼಆಜಾದಿ ಕಾ ಅಮೃತ್ ಮಹೋತ್ಸವ್ʼ ನ ಸಂದರ್ಭದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆಯಲ್ಲಿ ಆ.3 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು.
ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿಜೇತ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ರನ್ನು ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

























