ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ರವರ ಮನೆಗೆ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನ ಸಮಿತಿಯವರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ, ಸಹಾಯಧನ ನೀಡಿದರು.

ಈ ಸಂದರ್ಭದಲ್ಲಿ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಖ್ಯಾತ ವೈದ್ಯರಾದ ಡಾ. ಸುರೇಶ್ ಪುತ್ತೂರಾಯ, ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ನವಚೇತನ ಯುವಕ ಮಂಡಲದ ಅಧ್ಯಕ್ಷ ವಿಜಯ್ ಬಿ.ಎಸ್ , ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ,ಹರಿಣಿ ಪುತ್ತೂರಾಯ, ನವಚೇತನ ಯುವಕ ಮಂಡಲದ ಸದಸ್ಯರು, ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಹಾಗೂ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

























