ಪುತ್ತೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ರವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 7ರಂದು ಬಂಧನಕ್ಕೊಳಗಾಗಿದ್ದ ಮತ್ತಿಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪುತ್ತೂರು ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್ ರವರ ನೇತೃತ್ವದಲ್ಲಿ ನಿನ್ನೆ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಾದ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್ ಮತ್ತು ಸುಳ್ಯ ನಾವೂರು ನಿವಾಸಿ ಆಬಿದ್ ಎಂಬವರನ್ನು ಆ.7 ರಂದು ಪೊಲೀಸರು ಬಂಧಿಸಿದ್ದರು.
ರವಿವಾರದಂದು ಬಂಧಿಸಲಾಗಿರುವ ಆರೋಪಿಗಳನ್ನು ಸೋಮವಾರದಂದು ಸುಳ್ಯ ಮತ್ತು ಬೆಳ್ಳಾರೆಯ ಎಸ್ ಡಿ ಪಿ ಐ ಕಚೇರಿಗೆ ಹಾಗೂ ಸುಳ್ಯ ಮತ್ತು ಬೆಳ್ಳಾರೆಯ ಕೆಲವು ಕಡೆಗಳಲ್ಲಿ ಮಹಜರು ನಡೆಸಿ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ವಿಚಾರಣೆ ನಡೆಸಿದ ಕಿರಿಯ ಸಿವಿಲ್ ನ್ಯಾಯಾಧೀಶೆ ಅರ್ಪಿತಾ ರವರು ಆರೋಪಿಗಳಿಗೆ ಆ.8 ರಿಂದ ಆ.12ರ ವರೆಗೆ ನಾಲ್ಕು ದಿನಗಳ ನ್ಯಾಯಾಂಗ ಬಂಧನ ಆದೇಶ ನೀಡಿರುವುದಾಗಿ ತಿಳಿದು ಬಂದಿದೆ.

























