ನೆಲ್ಯಾಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿ ಸಮೀಪದ ಹೊಸವಕ್ಲು ಎಂಬಲ್ಲಿ ನಡೆದಿದೆ.
ನೆಲ್ಯಾಡಿ ಹೊಸವಕ್ಲು ನಿವಾಸಿ ಅಭಿಷೇಕ್(36) ಮೃತ ಯುವಕ.

ಅಭಿಷೇಕ್ ಮೈಸೂರಿನ ಬಾರ್ ವೊಂದರಲ್ಲಿ ಉದ್ಯೋಗದಲ್ಲಿದ್ದರು. ಆ.7 ರಂದು ಮನೆಗೆ ಆಗಮಿಸಿದ ಅವರು ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಬಗ್ಗೆ ಮೃತರ ತಂದೆ ಉಪ್ಪಿನಂಗಡಿ ಠಾಣೆಗೆ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಂದೆ ವಾಸುದೇವ ಗೌಡ ಹಾಗೂ ಸಹೋದರಿಯನ್ನು ಅಗಲಿದ್ದಾರೆ.



























