ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬರು ಮೆಟ್ಟಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಬಿಳಿ ಪಂಚೆ ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬರು ಕೆ.ಎಸ್.ಆರ್.ಟಿ.ಸಿ ವಾಣಿಜ್ಯ ಸಂಕೀರ್ಣದ ಮೆಟ್ಟಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥರಾದರು.

ತಕ್ಷಣ ಸ್ಥಳೀಯರು 108 ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.




























