ಬಂಟ್ವಾಳ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ (ರಿ.) ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಶ್ರೀ ಶಾರದಾ ಯುವ ವೇದಿಕೆಯ ಕಾರ್ಯಾಲಯದಲ್ಲಿ ಆಚರಿಸಲಾಯಿತು.

ಹಿರಿಯ ಕಾರ್ಯಕರ್ತರು, ಮಾಣಿ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಶೆಟ್ಟಿ ರವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಯಶೋಧರ ಪೂಜಾರಿ ಮಾಣಿ ಹಾಗೂ ಶ್ರೀ ಶಾರದಾ ಯುವ ವೇದಿಕೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು, ಉಪಸ್ಥಿತರಿದ್ದರು.





























