ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಾಣಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಭಾರತೀಯ ಭೂಸೇನೆಯ ನಿವೃತ್ತ ಸೈನಿಕ ಜಗನ್ನಾಥ ಶೆಟ್ಟಿ ಮಾಣಿ ಧ್ವಜಾರೋಹಣ ಮಾಡಿದರು.

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಸಮಾಜಸೇವಕಿ ಪ್ರಫುಲ್ಲಾ.ಆರ್.ರೈ, ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ಅಭಿವೃದ್ಧಿ ಅಧಿಕಾರಿ ಗಿರಿಜಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಣಿ, ಉಪಾಧ್ಯಕ್ಷೆ ಪುಷ್ಪಲತಾ, ಸದಸ್ಯರಾದ ಇಸ್ಮಾಯಿಲ್, ನಾರಾಯಣ.ಪಿ, ಮಮತಾ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


























