ವಿಟ್ಲ: ಆಜಾದಿ ಕಾ ಅಮೃತ್ ಮಹೋತ್ಸವ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯಿತು.

ನಿವೃತ್ತ ಯೋಧರಾದ ಕರುಣಾಕರ ದಯಾನಂದ, ರಮೇಶ, ಪುರಂದರ ಹಾಗೂ ನಾಗರಾಜ ರವರನ್ನು ಸನ್ಮಾನಿಸಲಾಯಿತು.

ಬೆಳಿಗ್ಗೆ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀಧರ ಶೆಟ್ಟಿ ರವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿಯಾದ ಪ್ರಕಾಶ್ ಕುಕ್ಕಿಲ ರವರು ಪ್ರಪಂಚದಲ್ಲಿ ಶ್ರೇಷ್ಠ ಸ್ಥಾನ ಪಡೆದುಕೊಂಡ ದೇಶದ ಶ್ರೇಷ್ಠತೆಯನ್ನು ಕೊಂಡಾಡಿದರು ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಹಸನ್ ವಿಟ್ಲ ಮೋಹನ್ ಎ, ಮೋನಪ್ಪ ಶೆಟ್ಟಿ, ಆಡಳಿತ ಅಧಿಕಾರಿ ರಾಧಾಕೃಷ್ಣ ಎ, ಪ್ರಾಂಶುಪಾಲರಾದ ಜಯರಾಮ್ ರೈ ಹಾಗೂ ಉಪಪ್ರಾಂಶುಪಾಲೆಯರಾದ ಜ್ಯೋತಿ ಶೆಣೈ ಹಾಗೂ ಹೇಮಲತಾ ಉಪಸ್ಥಿತರಿದ್ದರು.

ಕರುಣಾಕರ ರವರು ತಮ್ಮ ಕರ್ತವ್ಯದ ಅನುಭವವನ್ನು ಹಂಚಿಕೊಂಡರು. ಶಾಲಾ ನಾಯಕನಾದ ತೇಜಸ್ವಿ ತೆಂಕಬೈಲು ಈ ದಿನದ ಪ್ರಾಮುಖ್ಯತೆಯ ಕುರಿತು ಮಾತನಾಡಿದರು. ಎಲ್ ಕೆ ಜಿಯಿಂದ ಹಿಡಿದು 10ನೇ ತರಗತಿಯ ವರೆಗಿನ ಎಲ್ಲಾ ವಿದ್ಯಾರ್ಥಿಗಳು ದೇಶಭಕ್ತಿ ಮೂಡಿಸುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.































