ಮಂಗಳೂರು : ಕೊರೊನಾ ಎರಡನೇ ಅಲೆ ತಡೆಗೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ಮೊದಲ ಹಂತವಾಗಿ 8 ಜಿಲ್ಲೆಗಳಲ್ಲಿ ಬಾರ್, ಪಬ್, ಜಿಮ್ ಹಾಗೂ ಸ್ವಿಮ್ಮಿಂಗ್ ಪೂಲ್ ಗಳಿಗೆ ಅನಿರ್ದಿಷ್ಟಾವಧಿ ನಿರ್ಬಂಧ ಹೇರಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಬೀದರ್, ಧಾರವಾಡ ಹಾಗೂ ಕಲ್ಬುರ್ಗಿ ಜಿಲ್ಲೆಗಳಲ್ಲಿ ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರ ಲಾಕ್ ಡೌನ್ ಹೊರತಾದ ಕ್ರಮ ಕೈಗೊಳ್ಳಲು ಮುಂದಾಗಿದೆ.