ಬಂಟ್ವಾಳ: ತಾಲೂಕು ಮಾಣಿ ಗ್ರಾಮದ ದೈವಗಳ ಗಡಿಪ್ರಧಾನರಾದ ಪಲ್ಲತ್ತಿಲ ವೆಂಕಪ್ಪ ಪೂಜಾರಿಯವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಪ್ರಗತಿಪರ ಕೃಷಿಕರಾಗಿರುವ ಇವರ ಭತ್ತದ ಕೃಷಿ ಮತ್ತು ಹೈನುಗಾರಿಕೆಯಲ್ಲಿ ಮಾದರಿಯಾಗಿದ್ದರು. ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿಯೂ ತೊಡಗಿಕೊಂಡು ಎಲ್ಲರೊಂದಿಗೂ ಸಮಾನವಾಗಿ ಬೆರೆತು ಜನಮಾನಸದ ಪ್ರೀತಿಗೆ ಪಾತ್ರರಾಗಿದ್ದರು. ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಮೃತರ ಸ್ವಗೃಹ ಪಲ್ಲತ್ತಿಲದಲ್ಲಿ ನಡೆಯಿತು.
ಮೃತರು, ಮಕ್ಕಳು, ಕುಟುಂಬ ವರ್ಗ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಗಡಿಪ್ರಧಾನರಾದ ಗುಡ್ಡ ಶೆಟ್ಟಿ ಯಾನೆ ರತ್ನಾಕರ ಭಂಡಾರಿ, ಪ್ರಮುಖರಾದ ಬನ್ನೂರುಗುತ್ತು ಸುದೇಶ್ ಪೂಂಜಾ, ರಾಜ್ ಕಮಲ್ ಹೆಗ್ಡೆ, ಅರೆಬೆಟ್ಟು ಸಂತೋಷ್ ಶೆಟ್ಟಿ, ಚಂದ್ರಶೇಖರ ಪೂಜಾರಿ ಪಾದೆ, ಬದಿಗುಡ್ಡೆ ಜಗನ್ನಾಥ ಚೌಟ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ವೀರಕಂಭ ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿ ನಾರುಕೋಡಿ ಮುಂತಾದವರು ಭೇಟಿ ನೀಡಿ ಮೃತರ ಮನೆಯವರಿಗೆ ಸಾಂತ್ವನ ಹೇಳಿದರು.


























