ಪುತ್ತೂರು: ವಿಶ್ವ ಹಿಂದೂ ಪರಿಷದ್ ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪಿಸಲ್ಪಟ್ಟ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ‘ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ’ ಕಾರ್ಯಕ್ರಮವು ಆ.20 ರಂದು ನಡೆಯಲಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ ತನಕ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಖ್ಯಾತ ವೈದ್ಯರಾದ ಡಾ. ಸುರೇಶ್ ಪುತ್ತೂರಾಯ ರವರು ನೆರವೇರಿಸಲಿದ್ದಾರೆ. ಪುತ್ತೂರು ಜಿಲ್ಲಾ ಬಜರಂಗದಳ ಸಂಯೋಜಕರಾದ ಭರತ್ ಕುಮ್ಡೇಲು ರವರು ಧ್ವಜ ಹಸ್ತಾಂತರಿಸಲಿದ್ದಾರೆ.
ಸಂಜೆ 3 ಗಂಟೆಯಿಂದ ಅಟ್ಟಿ ಮಡಿಕೆ ಓಡೆಯುವ ಸಾಹಸಮಯ ಸ್ಪರ್ಧೆಯೊಂದಿಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಬೊಳುವಾರು ಆಂಜನೇಯ ಮಂತ್ರಾಲಯದ ಮುಂಭಾಗದಿಂದ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




























