ಸುಬ್ರಹ್ಮಣ್ಯ: ಈಜಲು ತೆರಳಿದ ಯುವಕ ನದಿ ನೀರಿನಲ್ಲಿ ಮುಳುಗಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ನೀರಿನಲ್ಲಿ ಮುಳುಗಿದ ಯುವಕನನ್ನು ಬೆಂಗಳೂರಿನ ಶಿವ ಎಂದು ಗುರುತಿಸಲಾಗಿದೆ.
ಶಿವ ರವರು ನದಿ ನೀರಿನಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


























