ಪುತ್ತೂರು: ನರಿಮೊಗರು ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಮೋನಪ್ಪ ಪುರುಷ ರವರ ಅಧ್ಯಕ್ಷತೆಯಲ್ಲಿ ಜೋಗಿ ಸುಧಾರಕ ಸಂಘದ ಸದಸ್ಯರ ಸಭೆ ಜರುಗಿತು.

ಸಭೆಯಲ್ಲಿ ಆ.28 ರಂದು ಕೆಸರ್ಡೊಂಜಿ ದಿನ ಕಾರ್ಯಕ್ರಮದ ನಡೆಸುವುದಾಗಿ ನಿರ್ಧರಿಸಲಾಯಿತು.

ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ವಿವಿಧ ಕ್ರೀಡಾಸ್ಪರ್ಧೆಗಳನ್ನು ನಡೆಸಲಾಗುವುದು, ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಸ್ಥಳದ ವ್ಯವಸ್ಥೆಯನ್ನು ಮಾಡಿ ಕೊಡುವುದು, ದೂರದ ಊರಿಂದ ಬಂದ ಸ್ಪರ್ಧಾಳುಗಳಿಗೆ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡುವುದರ ಬಗ್ಗೆ ಚರ್ಚೆ ನಡೆಸಲಾಯಿತು.

ಭಾನುವಾರದ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಊಟದ ವ್ಯವಸ್ಥೆ ಮತ್ತು ಸಂಜೆ ಲಘು ಉಪಹಾರದ ವ್ಯವಸ್ಥೆ ಸಂಜೆ ಸಭಾ ಕಾರ್ಯಕ್ರಮ ಹಾಗೂ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ನಡೆಯಲಿದೆ.
ಅಗಮಿಸಿದವರಿಗೆ ಉಳಿದುಕೊಳ್ಳಲು ವಸತಿಯ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




























