ಪುತ್ತೂರು: ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಸಂತ ವಿಕ್ಟರ್ಸ್ ಬಾಲಿಕಾ ಪ್ರೌಢಶಾಲೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2022ನೇ ಸಾಲಿನ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯು ಸಂತ ವಿಕ್ಟರ್ಸ್ ಬಾಲಿಕಾ ಪ್ರೌಢಶಾಲೆ ಆ.23 ರಂದು ನಡೆಯಿತು.

ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅನ್ವಿತ್ ಎನ್, 10ನೇ ತರಗತಿ(ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮೀ ಎ ದಂಪತಿ ಪುತ್ರ) ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಎಂದು ಶಾಲಾ ಮುಖ್ಯೋಪಾಧ್ಯಾಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



























