ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ (ಎನ್‌ಎಂಪಿಎ) ಸುಮಾರು 1,200 ಕೋ.ರೂ. ವೆಚ್ಚದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಸಾಗರಮಾಲದ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಸೆ.2 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಪುತ್ತೂರಿನಿಂದ 15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ: ಪೂರ್ವಭಾವಿ ಸಭೆ
ಸೆ.2 ರಂದು ಪ್ರಧಾನಮಂತ್ರಿ ಮೋದಿಯವರ ಮಂಗಳೂರು ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ಪ್ರಮುಖ ಕಾರ್ಯಕರ್ತರ ಸಭೆಯು ಪುತ್ತೂರಿನ ಟೌನ್ ಬ್ಯಾಂಕ್ ಹಾಲ್’ನಲ್ಲಿ ನಡೆಯಿತು.

ಈ ಸಭೆಯಲ್ಲಿ ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜಾ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷರಾದ ಜಗನ್ನಿವಾಸ್ ರಾವ್, ನಗರ ಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ವಿಭಾಗ ಸಹ ಪ್ರಭಾರಿಗಳಾದ ಗೋಪಾಲಕೃಷ್ಣ ಹೇರಳೆ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಮತ್ತು ಮಂಡಲದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಮೋದಿ ಆಗಮನದ ಹಿನ್ನೆಲೆ ಪುತ್ತೂರು ಬಿಜೆಪಿ ವತಿಯಿಂದ ಪೂರ್ವಭಾವಿ ಸಭೆ ನಡೆದಿದ್ದು, ಪುತ್ತೂರಿನಿಂದ ಕಾರ್ಯಕ್ರಮಕ್ಕೆ 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದ್ದು, 150ಕ್ಕೂ ಅಧಿಕ ಬಸ್ ಗಳ ವ್ಯವಸ್ಥೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಸೆ.2 ರಂದು ಬೆಳಗ್ಗೆ ಕೊಚ್ಚಿಯಲ್ಲಿ ಕಾರ್ಯಕ್ರಮದ ಬಳಿಕ ಸಂಜೆ 3.45ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಎನ್‌ಎಂಪಿಎಗೆ ಭೇಟಿ ನೀಡಿ ಅಲ್ಲಿ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ನೆರವೇರಿಸಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಬಹುತೇಕ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಸಮಾವೇಶ ನಡೆಯಲಿದೆ.
ಪ್ರಧಾನಿಯವರ ಜತೆ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ, ಕೇಂದ್ರ ಬಂದರು ಮತ್ತು ನೌಕಾಯಾನ ಸಚಿವ ಸರ್ಬಾನಂದ ಸೋನೊವಾಲಾ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಮುಂತಾದವರು ಆಗಮಿಸುವ ನಿರೀಕ್ಷೆಯಿದೆ.


























