ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಆ.22 ರಂದು ಶೈಕ್ಷಣಿಕ ವರ್ಷದ 2022-23ಕ್ಕೆ ದಾಖಲಾತಿಗೊಂಡ ಪ್ರಥಮ ಪದವಿ ವಿದ್ಯಾರ್ಥಿಗಳ ಮಾಹಿತಿ ಕಾರ್ಯಾಗಾರ ನಡೆಯಿತು.

ಸಮಾರಂಭದಲ್ಲಿ ಕಾಲೇಜಿನ ಅಧ್ಯಕ್ಷರಾದ ಜಯಂತ ನಡುಬೈಲು ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳ ಪಾತ್ರದ ಮಹತ್ವದೊಂದಿಗೆ ವೃತ್ತಿಪರ ಕೋರ್ಸ್ ಗಳಿಂದ ವಿದ್ಯಾರ್ಥಿಗಳಿಗೆ ದೊರಕುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ಪ್ರಾಂಶುಪಾಲರಾದ ಸಂಪತ್ ಪಕ್ಕಳ ರವರು ಕಾಲೇಜಿನ ವೇಳಾಪಟ್ಟಿ ಹಾಗೂ ನಿಯಮಗಳನ್ನು ಮಕ್ಕಳಿಗೆ ತಿಳಿಪಡಿಸಿದರು. ವೇದಿಕೆಯಲ್ಲಿ ಆಡಳಿತಾಧಿಕಾರಿ ಅರ್ಪಿತ್ ಟಿ.ಎ. ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಪ್ರಭಾವತಿ ಪ್ರಾರ್ಥಿಸಿದರು, ಸಂಪತ್ ಪಕ್ಕಳ ಸ್ವಾಗತಿಸಿ, ಅರ್ಪಿತ್ ಟಿ.ಎ. ವಂದಿಸಿದರು, ರಕ್ಷಣ ಟಿ.ಆರ್ ಕರ‍್ಯಕ್ರಮ ನಿರೂಪಿಸಿದರು.





























