ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಿಂದಾಗಿ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಘಟನೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


























