ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ.

ಘಟನೆಯಿಂದಾಗಿ ಬಸ್ಸಿ ನಲ್ಲಿದ್ದ ಮಗು ಹಾಗೂ ತಂದೆ ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಡ್ಡಹೊಳೆಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.
ಲಾರಿಯ ಚಾಲಕನಿಗೂ ಸಣ್ಣಪುಟ್ಟ ಗಾಯವಾಗಿದ್ದು, ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ಪರಿಶೀಲನೆ ನಡೆಸಿದ್ದಾರೆ.


























