ಬೆಂಗಳೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಗುರುಭವನದಲ್ಲಿ ಆಯೋಜಿಸಲಾಗಿದ್ದ ಮಂಗಳೂರು ನಗರದ ಬಾವುಟ ಗುಡ್ಡದಲ್ಲಿ ಸ್ಥಾಪನೆಗೊಳ್ಳಲಿರುವ ಸಂಘಟನಾ ಚತುರ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯಗೌಡ ರವರ ಕಂಚಿನ ಪ್ರತಿಮೆ ಪುರಪ್ರವೇಶ ಕಾರ್ಯಕ್ರಮಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಚಾಲನೆ ನೀಡಿ, ಆಶೀರ್ವಚನ ನೀಡಿದರು.


ಕಾರ್ಯಕ್ರಮದಲ್ಲಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ನಾಗಮಂಗಲ ಶಾಸಕರಾದ ಸುರೇಶ್ ಗೌಡ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ರೇಣುಕಾ ಪ್ರಸಾದ್, ದಕ್ಷಿಣ ಕನ್ನಡ ಜಿಲ್ಲೆಯ ಯುವ ಒಕ್ಕಲಿಗರ ಸಂಘದ ಅಧ್ಯಕ್ಷ ಅಕ್ಷಯ್, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉತ್ಸವ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಹಾಗೂ ಇನ್ನಿತರ ಗಣ್ಯರು ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯ ಶ್ರೀಮಠದ ಭಕ್ತರು ಉಪಸ್ಥಿತರಿದ್ದರು.



ಮಂಗಳೂರು ನಗರದ ಬಾವುಟ ಗುಡ್ಡದಲ್ಲಿ ಸ್ಥಾಪನೆಗೊಳ್ಳಲಿರುವ ಸಂಘಟನಾ ಚತುರ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯಗೌಡ ರವರ ಕಂಚಿನ ಪ್ರತಿಮೆ ಮೆರವಣಿಗೆಗೆ ಬೆಂಗಳೂರಿನ ಆದಿಚುಂಚನಗಿರಿಯಲ್ಲಿ ಚಾಲನೆ ನೀಡಲಾಗಿದ್ದು, ಮಡಿಕೇರಿ-ಸಂಪಾಜೆ -ಸುಳ್ಯ-ಪುತ್ತೂರು-ಮಾಣಿ ಮಾರ್ಗವಾಗಿ ಆ.29 ರಂದು ಸಂಜೆ ವೇಳೆಗೆ ಮಂಗಳೂರು ಪ್ರವೇಶ ಮಾಡಲಿದೆ.
ನಾಳೆ ಸಂಜೆ ಮಂಗಳೂರು ನಗರದ ಬಾವುಟ ಗುಡ್ಡದಲ್ಲಿ ಸಂಘಟನಾ ಚತುರ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯಗೌಡ ರವರ ಕಂಚಿನ ಪ್ರತಿಮೆ ಸ್ಥಾಪನೆಗೊಳ್ಳಲಿದೆ.

























