ಉಪ್ಪಿನಂಗಡಿ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಟಿಪ್ಪರ್ ನಿಲ್ಲಿಸದೆ ಪರಾರಿಯಾದ ಘಟನೆ ಕುಪ್ಪೆಟ್ಟಿಯಲ್ಲಿ ಆ.29 ರಂದು ನಡೆದಿದೆ.
ಮೃತ ಬೈಕ್ ಸವಾರನನ್ನು ಉಳಿ ಗ್ರಾಮದ ನಿವಾಸಿ ಸಫ್ವಾನ್ (20) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಟಿಪ್ಪರ್ ಮತ್ತು ಬೆಳ್ತಂಗಡಿಯಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಡಿಕ್ಕಿ ಹೊಡೆದ ಟಿಪ್ಪರ್ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದು, ಟಿಪ್ಪರ್ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


























