ಸುಪ್ರೀಂ ಕೋರ್ಟ್ನಲ್ಲಿ ಹಿಜಾಬ್ ಪ್ರಕರಣದ ವಿಚಾರಣೆ ಮುಂದೂಡಲು ವಕೀಲ ತುಷಾರ್ ಮೆಹ್ತಾ ಮನವಿ ಮಾಡಿದ್ದಾರೆ ಆದರೆ ಇದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿಲ್ಲ, ತಮಗೆ ಬೇಕಾದ ಕೋರ್ಟ್ ಆಯ್ಕೆ ಮಾಡಿಕೊಳ್ಳಲು ಅವಕಾಶ ಕೊಡಲ್ಲ ಎಂದು ಸುಪ್ರೀಂ ಕೋರ್ಟ್ ಖಡಕ್ ಉತ್ತರ ನೀಡಿದೆ. ಕರ್ನಾಟಕ ಸರ್ಕಾರ, ಪ್ರತಿವಾದಿಗಳಿಗೆ ಸುಪ್ರೀಂ ನೋಟಿಸ್ ನೀಡಿದೆ. ಸೆಪ್ಟೆಂಬರ್ 5 ರಂದು ಪ್ರಕರಣದ ವಿಚಾರಣೆಗೆ ನಿಗದಿ ಮಾಡಿದೆ.
ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದರ ನಿಷೇಧದ ಬಗ್ಗೆ ವಿಚಾರಣೆಯನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಹಾಕಲಾಗಿತ್ತು ಇಂದು ಸುಪ್ರೀಂ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ನೋಟಿಸ್ ನೀಡಿದೆ.
ಈ ವಿಚಾರಣೆಯನ್ನು ಕೈಗಿತ್ತಿಕೊಂಡ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಈ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದೆ.
ನೀವು ಹೇಳಿದಂತೆ ನಡೆದುಕೊಳ್ಳಲು ಸಾಧ್ಯವಿಲ್ಲ. ತುರ್ತು ವಿಚಾರಣೆ ನಡೆಸಲು ಮನವಿ ಬಯಸಿದ್ದೀರಿ ಮತ್ತು ಈಗ ನೀವು ವಿಚಾರಣೆಯನ್ನು ಮುಂದೂಡಲು ಬಯಸುತ್ತೀರಿ. ನಾವು ಈ ಬಗ್ಗೆ ಅನುಮತಿ ನೀಡುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಸರ್ಕಾರಕ್ಕೆ ಈ ಬಗ್ಗೆ ನೋಟಿಸ್ ನೀಡಿದ್ದು, ಸೆಪ್ಟೆಂಬರ್ 5ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.


























