ಕೇಂದ್ರ ಲೋಕ ಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಕೇಂದ್ರ ಗುಪ್ತಚರ ಅಧಿಕಾರಿ, ವಿಜ್ಞಾನಿ ಹುದ್ದೆಗಳು ಸೇರಿದಂತೆ ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿ ಹೊರಡಿಸಲಾಗಿದೆ. ಕೇಂದ್ರ ಸರ್ಕಾರಿ ನೌಕರಿಗೆ ತಯಾರಿ ನಡೆಸುತ್ತಿರುವ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 15 ಆಗಿದೆ.
ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ..
- ಸಂಸ್ಥೆಯ ಹೆಸರು: ಕೇಂದ್ರ ಲೋಕ ಸೇವಾ ಆಯೋಗ
- ಹುದ್ದೆಯ ಹೆಸರು: ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ, ವಿಜ್ಞಾನಿ
- ಹುದ್ದೆಗಳ ಸಂಖ್ಯೆ: 19
- ಉದ್ಯೋಗ ಸ್ಥಳ: ನವದೆಹಲಿ – ಕೋಲ್ಕತ್ತಾ – ಹೈದರಾಬಾದ್ – ಅಖಿಲ ಭಾರತ
- ವೇತನ: ಯುಪಿಎಸ್ಸಿ ನಿಯಮಗಳ ಪ್ರಕಾರ
| ಹುದ್ದೆ | ಹುದ್ದೆ ಸಂಖ್ಯೆ | ವಿದ್ಯಾರ್ಹತೆ | ವಯೋಮಿತಿ |
| ಮಾನವಶಾಸ್ತ್ರಜ್ಞ | 1 | ಮಾನವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ | ಗರಿಷ್ಟ 38 ವರ್ಷ |
| ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ | 4 | ಎಂಎಸ್ಸಿ | ಗರಿಷ್ಟ 30 ವರ್ಷ |
| ವಿಜ್ಞಾನಿ ಬಿ (ಬ್ಯಾಲಿಸ್ಟಿಕ್ಸ್) | 1 | ಭೌತಶಾಸ್ತ್ರ / ಗಣಿತ / ಅನ್ವಯಿಕ ಗಣಿತ / ನ್ಯಾಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ | ಗರಿಷ್ಟ 35 ವರ್ಷ |
| ವಿಜ್ಞಾನಿ ಬಿ (ಫೊರೆನ್ಸಿಕ್ ಎಲೆಕ್ಟ್ರಾನಿಕ್ಸ್) | 3 | ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್/ಫೋರೆನ್ಸಿಕ್ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ | ಗರಿಷ್ಟ 35 ವರ್ಷ |
| ವಿಜ್ಞಾನಿ ಬಿ (ಫೊರೆನ್ಸಿಕ್ ಸೈಕಾಲಜಿ) | 3 | ಸೈಕಾಲಜಿ/ಕ್ರಿಮಿನಾಲಜಿ, ಫೊರೆನ್ಸಿಕ್ ಸೈನ್ಸ್/ಸೈಕಾಲಜಿ/ಕ್ರಿಮಿನಾಲಜಿಯಲ್ಲಿ ಸ್ನಾತಕೋತ್ತರ ಪದವಿ | ಗರಿಷ್ಟ 35 ವರ್ಷ |
| ಪುನರ್ವಸತಿ ಅಧಿಕಾರಿ | 4 | ಸಮಾಜಕಾರ್ಯ/ಸಮಾಜಶಾಸ್ತ್ರ/ಶಿಕ್ಷಣ/ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ | ಗರಿಷ್ಟ 30 ವರ್ಷ |
| ಉಪ ಮಹಾನಿರ್ದೇಶಕರು/ಪ್ರಾದೇಶಿಕ ನಿರ್ದೇಶಕರು | 3 | ವಿದೇಶಿ ಭಾಷಾ ಕೋರ್ಸ್ನೊಂದಿಗೆ ಡಿಪ್ಲೊಮಾ, ಪದವಿ | ಗರಿಷ್ಟ 50 ವರ್ಷ |
ವಯೋಮಿತಿ ಸಡಿಲಿಕೆ:
- ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
- ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
- ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಪ.ಜಾ, ಪ.ಪಂ, ವಿಕಲಚೇತನ, ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 25 ರೂ
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27 ಆಗಸ್ಟ್ 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಸೆಪ್ಟೆಂಬರ್ 2022
ಸಂಪೂರ್ಣವಾಗಿ ಸಲ್ಲಿಸಿದ ಆನ್ಲೈನ್ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 16 ಸೆಪ್ಟೆಂಬರ್ 2022
ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಬ್ಸೈಟ್: upsc.gov.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
- ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
- ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ
- ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ ಅನುಸಾರವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್ಡೇಟ್ ಮಾಡಿ
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್ ಕ್ಲಿಕ್ ಮಾಡಿ.


























