ಖ್ಯಾತ ಕಬಡ್ಡಿ ಆಟಗಾರ, ಕರ್ನಾಟಕ ರಾಜ್ಯ ಕಬಡ್ಡಿ ತಂಡದ ನೂತನ ನಾಯಕ, ಬ್ಯಾಂಕ್ ಬರೋಡದ ಉದ್ಯೋಗಿಯಾಗಿರುವ ಪ್ರಶಾಂತ್ ರೈ ಕೈಕಾರ ರವರು ಕ್ರೀಡಾ ಕ್ಷೇತ್ರದಲ್ಲಿನ ಅತ್ಯುನ್ನತ ಸಾಧನೆಗೆ ಕೊಡಮಾಡುವ ಏಕಲವ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇಂದು(ಆ.29) ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಾಂತ್ ರೈ ರವರು ಏಕಲವ್ಯ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪ್ರಶಾಂತ್ ರೈ ಕೈಕಾರ ರವರು ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವಂತಹ ಅತ್ಯುನ್ನತ ಸಾಧನೆಗಾಗಿ ಏಕಲವ್ಯ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಯಿತು.

























