ಪುತ್ತೂರು: ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪುತ್ತೂರಿನ ಬಿರುಮಲೆ ಗುಡ್ಡಯಲ್ಲಿದ್ದ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಅಲ್ಲಿಗೆ ಆಗಮಿಸುವ ವೇಳೆ ವಿದ್ಯಾರ್ಥಿ-ವಿದ್ಯಾರ್ಥಿನಿಯರ ತಂಡ ಅಲ್ಲಿಂದ ಪರಾರಿಯಾದ ಘಟನೆ ನಡೆದಿದೆ.
ಪ್ರತಿಷ್ಠಿತ ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿಗಳ ಸಹಿತ ಎಲ್ಲಾ ಧರ್ಮಕ್ಕೆ ಸೇರಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬಿರುಮಲೆ ಗುಡ್ಡದಲ್ಲಿದ್ದ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳುವ ವೇಳೆ ವಿದ್ಯಾರ್ಥಿಗಳು ಅಲ್ಲಿಂದ ಪರಾರಿಯಾಗಿದ್ದಾರೆನ್ನಲಾಗಿದೆ.
























