ಪುತ್ತೂರು: ಹಿಂದೂ ಜಾಗರಣ ವೇದಿಕೆ ತ್ಯಾಗರಾಜ ನಗರ ವತಿಯಿಂದ 20ನೇ ವಾರ್ಷಿಕ ಸಮಾರಂಭ ಮತ್ತು ಸಾಮೂಹಿಕ ಗಣಪತಿ ಹವನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸ.2 ರಂದು ನಡೆಯಲಿದೆ.
ಬೆಳಿಗ್ಗೆ ಸಾಮೂಹಿಕ ಶ್ರೀ ಗಣಪತಿ ಹವನ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ಕೆದಂಬಾಡಿ ಮತ್ತು ಅರಿಯಡ್ಕ ಗ್ರಾಮದ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಭಜನಾ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮ ಬಹುಮಾನ ವಿತರಣೆ ನಡೆಯಲಿದೆ.
ಧಾರ್ಮಿಕ ಸಭಾ ಕಾರ್ಯಕ್ರಮ ಸಭಾಧ್ಯಕ್ಷತೆಯನ್ನು ಸುನಿಲ್ ತ್ಯಾಗರಾಜನಗರ ರವರು ವಹಿಸಲಿದ್ದಾರೆ. ಧಾರ್ಮಿಕ ಉಪನ್ಯಾಸವನ್ನು ಸವಣೂರು ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷರಾದ ಗಿರಿಶಂಕರ ಸುಲಾಯ ರವರು ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪ್ರಗತಿಪರ ಕೃಷಿಕರಾದ ಕಡಮಜಲು ಸುಭಾಶ್ ರೈ ರವರು ಆಗಮಿಸಲಿದ್ದಾರೆ.
ರಾತ್ರಿ 8 ಗಂಟೆಗೆ ಶ್ರೀ ದೇವತಾ ಭಜನಾ ಮಂದಿರ(ರಿ.) ತಿಂಗಳಾಡಿ ಇದರ ಆಶ್ರಯದಲ್ಲಿ ಪೂಜಿಸಿದ ಶ್ರೀ ಮಹಾಗಣೇಶನ ಶೋಭಾಯಾತ್ರೆಯನ್ನು ಬರಮಾಡಿಕೊಂಡು ಹಣ್ಣುಕಾಯಿ ಸಮರ್ಪಣೆ ಹಾಗೂ ಮಂಗಳಾರತಿ ನಡೆಯಲಿದೆ.


























