ಪುತ್ತೂರು: ಮೂರು ವರ್ಷಗಳ ಹಿಂದೆ ಗಣೇಶ ಚತುರ್ಥಿಯ ಸಂದರ್ಭದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ರವರ ಮೂರನೇ ವರ್ಷದ ಪುಣ್ಯತಿಥಿಯನ್ನು ಆ.3 ರಂದು ಆಚರಿಸಲಾಯಿತು.
ಹಿಂದೂ ಜಾಗರಣ ವೇದಿಕೆ ಪುತ್ತೂರು ವತಿಯಿಂದ ಕಾರ್ತಿಕ್ ಮೇರ್ಲ ರವರ ಸ್ಮರಣಾರ್ಥ ಸಂಪ್ಯದಲ್ಲಿ ನಿರ್ಮಿಸಲಾಗಿರುವ ಬಸ್ ತಂಗುದಾಣದಲ್ಲಿ ಅಳವಡಿಸಲಾಗಿರುವ ಕಾರ್ತಿಕ್ ಮೇರ್ಲ ರವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ದೀಪ ಬೆಳಗಿಸಿ, ಪುಷ್ಪಾರ್ಚನೆ ಮಾಡಲಾಯಿತು.
ಈ ವೇಳೆ ಮೇರ್ಲ ರವರ ಮನೆಯವರು ಮತ್ತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.