ನವದೆಹಲಿ: ನಿನ್ನೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ಅವರು ಮಂಗಳೂರಿನ ಜನರ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ..!??
ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ ಎಂದು ತಿಳಿಸಿರುವ ಅವರು, ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಶುಕ್ರವಾರ ಗೋಲ್ಡ್ ಫಿಂಚ್ ಹೋಟೆಲ್ ಮೈದಾನದಲ್ಲಿ 3 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸ ನಡೆಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ ತಲುಪಬೇಕು. ಡಬಲ್ ಎಂಜಿನ್ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದರು.
ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ. pic.twitter.com/rrHfIMZwSU
— Narendra Modi (@narendramodi) September 3, 2022