ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸೆ.3 ರಂದು ರಾತ್ರಿ ಪುತ್ತೂರಿನಲ್ಲಿ ನಡೆದಿದೆ.
ಮೃತರನ್ನು ವೀರಮಂಗಿಲ ಖಂಡಿಗ ನಿವಾಸಿ ಚಂದ್ರಶೇಖರ್ ರವರ ಪುತ್ರ ಭರತ್ ರಾಜ್ ಗೌಡ (23) ಎಂದು ಗುರುತಿಸಲಾಗಿದೆ.
ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಧನುಷ್(24) ಮತ್ತು ಭರತ್ ರಾಜ್ ಗೌಡ(22)ರವರು ಡ್ಯೂಕ್
ಬೈಕ್‌ನಲ್ಲಿ ಬಂದಿದ್ದು, ಪರ್ಲಡ್ಕ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ
ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ
ಬೈಕ್ ಮಂಗಳೂರು ಕಡೆ ಹೋಗುತ್ತಿದ್ದ ಬಸ್ ನ ಹಿಂಬದಿಯ
ಭಾಗಕ್ಕೆ ಡಿಕ್ಕಿಯಾಗಿದೆ.
ಘಟನೆಯಿಂದ ತಲೆಗೆ ಗಂಭೀರ ಗಾಯಗೊಂಡ ಭರತ್‌ರಾಜ್ ಗೌಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೈಕ್ ನಲ್ಲಿದ್ದ ಸಹಸವಾರ ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ರವರ ಪುತ್ರ ಧನುಷ್(24) ಕೂಡ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.