ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಯಶವಂತ ಸರೋಳಿ(50) ಸೆ.6 ರಂದು ರಾತ್ರಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಯಶವಂತ ರವರು ಕೆಲ ಸಮಯಗಳಿಂದ ಅನಾರೋಗ್ಯದಿಂದಿದ್ದು, ನಿನ್ನೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೇರಳಕಟ್ಟೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.