ವಿಟ್ಲ: ಲಯನ್ಸ್ ಜಿಲ್ಲೆ 317 ಡಿ ಪ್ರಾಂತ್ಯ 7 ರ ಪ್ರಾಂತೀಯ ಸಮ್ಮೇಳನವು ನ.20 ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಪ್ರಾಂತೀಯ ಅಧ್ಯಕ್ಷ ಸುದರ್ಶನ್ ಪಡಿಯಾರ್ ಅವರ ನೇತೃತ್ವದಲ್ಲಿ ಪ್ರಾಂತೀಯ ಸಮ್ಮೇಳನದ ಸಲಹೆಗಾರ ಲಯನ್ ಸತೀಶ್ ಕುಮಾರ್ ಆಳ್ವರವರು ಕೊಡಮಾಡಿದ ಪ್ರಿಂಟರನ್ನು ವಿಟ್ಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಚ್.ಇ. ನಾಗರಾಜ್ ರವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ಸಂದೀಪ್ ಶೆಟ್ಟಿ, ವಿಟ್ಲ ಸಿಟಿ ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಹರೀಶ್ ಶೆಟ್ಟಿ, ಸದಾನಂದ ಗೌಡ ಸೇರಾಜೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

